Anganwadi Recruitment:ಅಂಗನವಾಡಿ ನೇಮಕಾತಿ 2024! ಕಾರ್ಯಕರ್ತೆ/ಸಹಾಯಕಿ ಹುದ್ದೆಗಳು ಅರ್ಜಿ ಆಹ್ವಾನ!

ಶಿವಮೊಗ್ಗ ಜಿಲ್ಲೆಯಲ್ಲಿರುವ ಅಂಗನವಾಡಿ ಕೇಂದ್ರಗಳಲ್ಲಿ ಕಾರ್ಯನಿರ್ವಹಿಸಲು ಇಚ್ಛಿಸುವ ಮಹಿಳೆಯರಿಗೆ ಒಂದು ಸುವರ್ಣಾವಕಾಶ ಸಿಕ್ಕಿದೆ. ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಗೌರವಧನ ಆಧಾರದ ಮೇಲೆ ಈ ಹುದ್ದೆಗಳನ್ನು ಭರ್ತಿ ಮಾಡಲಾಗುವುದು. ಈ ಲೇಖನದಲ್ಲಿ ಈ ಹುದ್ದೆಗಳ ಕುರಿತಾದ ಸಂಪೂರ್ಣ ಮಾಹಿತಿಯನ್ನು ನೀಡಲಾಗಿದೆ.

WhatsApp Group Join Now
Telegram Group Join Now

ಶಿವಮೊಗ್ಗ ಜಿಲ್ಲೆಯ 7 ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ಬರುವ ಎಲ್ಲಾ ತಾಲೂಕುಗಳಲ್ಲಿ ಈ ಹುದ್ದೆಗಳು ಖಾಲಿ ಇವೆ. ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಹ ಮಹಿಳಾ ಮತ್ತು ಮಹಿಳಾ ಲಿಂಗತ್ವ ಅಲ್ಪಸಂಖ್ಯಾತ ಸ್ಥಳೀಯ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ಖಾಲಿ ಇರುವ ಹುದ್ದೆಗಳ ಸಂಖ್ಯೆ:

  • ಶಿವಮೊಗ್ಗ: ಕಾರ್ಯಕರ್ತೆಯರು-34, ಸಹಾಯಕಿಯರು-118
  • ಭದ್ರಾವತಿ: ಕಾರ್ಯಕರ್ತೆಯರು -10, ಸಹಾಯಕಿಯರು -72
  • ಹೊಸನಗರ: ಕಾರ್ಯಕರ್ತೆಯರು-07, ಸಹಾಯಕಿಯರು -35
  • ಸಾಗರ: ಕಾರ್ಯಕರ್ತೆಯರು-21, ಸಹಾಯಕಿಯರು- 62
  • ಶಿಕಾರಿಪುರ: ಕಾರ್ಯಕರ್ತೆಯರು-08, ಸಹಾಯಕಿಯರು -55
  • ಸೊರಬ: ಕಾರ್ಯಕರ್ತೆಯರು-38, ಸಹಾಯಕಿಯರು -65
  • ತೀರ್ಥಹಳ್ಳಿ: ಕಾರ್ಯಕರ್ತೆಯರು 09, ಸಹಾಯಕಿಯರು- 41

ಅರ್ಜಿ ಸಲ್ಲಿಸುವ ವಿಧಾನ:

ಆಸಕ್ತ ಅಭ್ಯರ್ಥಿಗಳು ಇಲಾಖೆಯ ವೆಬ್‌ಸೈಟ್ https://karnemakaone.kar.nic.in/abcd/ ಮೂಲಕ ಆಗಸ್ಟ್ 29 ರೊಳಗಾಗಿ ಅರ್ಜಿ ಸಲ್ಲಿಸಬೇಕು.

ರಾಷ್ಟ್ರೀಯ ಆರೋಗ್ಯ ಅಭಿಯಾನದಡಿಯಲ್ಲಿ ಹುದ್ದೆಗಳು:

ರಾಷ್ಟ್ರೀಯ ಆರೋಗ್ಯ ಅಭಿಯಾನದಡಿಯಲ್ಲಿ ವಿವಿಧ ವೈದ್ಯಕೀಯ ಹುದ್ದೆಗಳಿಗೆ ನೇರ ಸಂದರ್ಶನ ನಡೆಯಲಿದೆ. ಆಸಕ್ತರು ಆಗಸ್ಟ್ 08 ರಂದು ಶಿವಮೊಗ್ಗದಲ್ಲಿ ನಡೆಯುವ ನೇರ ಸಂದರ್ಶನದಲ್ಲಿ ಭಾಗವಹಿಸಬಹುದು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 08182-220685 ನ್ನು ಸಂಪರ್ಕಿಸಬಹುದು.

ಶಿವಮೊಗ್ಗದಲ್ಲಿ ಅಂಗನವಾಡಿ ಕಾರ್ಯಕರ್ತೆಯಾಗಿ ಸೇವೆ ಸಲ್ಲಿಸುವ ಇಚ್ಛೆಯನ್ನು ಹೊಂದಿರುವ ಮಹಿಳೆಯರಿಗೆ ಇದು ಒಂದು ಅದ್ಭುತ ಅವಕಾಶ. ಅರ್ಹ ಅಭ್ಯರ್ಥಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬೇಕು. ಹೆಚ್ಚಿನ ಮಾಹಿತಿಗಾಗಿ ಇಲಾಖೆಯ ವೆಬ್‌ಸೈಟ್ ಅನ್ನು ಭೇಟಿ ಮಾಡಬಹುದು.

ಇದನ್ನು ಓದಿ:BPNL Recruitment: ಪಶುಪಾಲನಾ ನಿಗಮದಲ್ಲಿ 2250 ಹುದ್ದೆಗಳಿಗೆ ನೇಮಕಾತಿ!

ಈ ಮಾಹಿತಿಯು ನಿಮಗೆ ಉಪಯುಕ್ತವಾದರೆ ನಿಮ್ಮ ಸ್ನೇಹಿತರನ್ನು ಶೇರ್ ಮಾಡಿ ಹಾಗೂ ಇದೇ ರೀತಿಯ ಮಾಹಿತಿಯನ್ನು ಪಡೆಯಲು ನಮ್ಮ ಟೆಲಿಗ್ರಾಮ್ ಗ್ರೂಪ್ ಅನ್ನು ಜಾಯಿನ್ ಆಗಿ ಧನ್ಯವಾದಗಳು.

ಟೆಲಿಗ್ರಾಮ್ ಗ್ರೂಪ್ ಜಾಯಿನ್ ಆಗಲು ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ:

WhatsApp Group Join Now
Telegram Group Join Now

Leave a comment